ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರದಲ್ಲಿರುವ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಪ್ರಯಾಣಿಕರು, ಫ್ಲಾಟ್ ಫಾರಂನಲ್ಲಿ ಇರುವವರು ಆತಂಕಕ್ಕೆ ಒಳಗಾಗಿದ್ದರು.
ಮುಂಜಾನೆ 5.45ಕ್ಕೆ ಫ್ಲಾಟ್ ಫಾರಂಗೆ ಬಂದು ನಿಂತಿದ್ದ ಉದ್ಯಾನ್ ಎಕ್ಸ್ ಪ್ರೆಸ್ ಟ್ರೇನಿನ ಬಿ-1 ಹಾಗೂ ಬಿ-2 ಬೋಗಿಯಲ್ಲಿ ಮುಂಜಾನೆ 7.10ರ ಸುಮಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಎಲ್ಲರೂ ಆತಂಕಕ್ಕೆ ಒಳಗಾಗಿದ್ದರು. ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.