ನಟ ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ಸದ್ದು

105

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಭಾನುವಾರ ಮುಂಜಾನೆ ಅಪರಿಚಿತರು ಗುಂಡು ಹಾರಿಸಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ನಿವಾಸದ ಮುಂದೆ ನಸುಕಿನ ಜಾವ 4.50ರ ಸುಮಾರಿಗೆ ಗುಂಡು ಹಾರಿಸಿದ ಸದ್ದು ಕೇಳಿದೆ.

ಇಬ್ಬರು ಶೂಟರ್ ಗಳು ಬೈಕ್ ನಲ್ಲಿ ಬಂದು ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಯಾವುದೇ ಅಪಾಯ ಸಂಭವಿಸಿಲ್ಲ. ನಟನ ಮನೆಯ ಸುತ್ತ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಸ್ಥಳೀಯ ಪೊಲೀಸರು, ಅಪರಾಧ ತಡೆ ವಿಭಾಗದವರು ಸ್ಥಳ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಪತ್ತೆ ಹಚ್ಚು ಕೆಲಸ ನಡೆದಿದೆ.




Leave a Reply

Your email address will not be published. Required fields are marked *

error: Content is protected !!