ರೌಡಿ ಶೀಟರ್ ಮೇಲೆ ಫೈರಿಂಗ್

297

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೋಮವಾರ ಬೆಳಗ್ಗೆ ಗುಂಡಿನ ಸದ್ದು ಕೇಳಿಸಿದೆ. ರೌಡಿ ಶೀಟರ್ ವಿಜಯಕುಮಾರ ಅಲಿಯಾಸ್ ಗೊಣ್ಣೆ ವಿಜಯ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಎಡಗಾಲಿಗೆ ಗುಂಡೇಟು ಹಾರಿಸಿ ಬಂಧಿಸಲಾಗಿದೆ.

ಖಚಿತ ಮಾಹಿತಿ ಬಂದ ಬಳಿಕ ವೀರಭದ್ರ ನಗರಕ್ಕೆ ಪೊಲೀಸರು ತೆರಳಿದ್ದಾರೆ. ಈ ವೇಳೆ ಕಾನ್ಸ್ ಟೇಬಲ್ ವೊಬ್ಬರ ಮೇಲೆ ಹಲ್ಲೆಗೆ ಮುಂದಾಗಿ ತಪ್ಪಿಸಿಕೊಳ್ಳಲು ನೋಡಿದ್ದಾನೆ. ಆಗ ಫೈರಿಂಗ್ ಮಾಡಿ ಎಡಗಾಲಿಗೆ ಗುಂಡು ಹಾರಿಸಲಾಗಿದೆ. ಬಳಿಕ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈತ 18ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.




Leave a Reply

Your email address will not be published. Required fields are marked *

error: Content is protected !!