ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ: ಇಬ್ಬರ ಬಂಧನ

75

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಮುಂಬೈ: ಇಲ್ಲಿನ ಬಾಂದ್ರಾದಲ್ಲಿರುವ ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಮನೆ ಮುಂದೆ ಭಾನುವಾರ ಇಬ್ಬರು ಗುಂಡಿನ ದಾಳಿ ನಡೆಸಿದ್ದರು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ವಿಕ್ಕಿ ಗುಪ್ತಾ ಹಾಗೂ ಸಾಗರ ಪಾಲ್ ಅನ್ನೋ ಇಬ್ಬರುನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ. ಗುಜರಾತಿನ ಭುಜ್ ನಲ್ಲಿ ಮುಂಬೈ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ರಾತ್ರಿಯೇ ಮುಂಬೈಗೆ ಕರೆದುಕೊಂಡು ಬರಲಾಗಿದೆ.

ಬಾಂದ್ರಾ ಪ್ರದೇಶದಲ್ಲಿನ ಗ್ಯಾಲಕ್ಸಿ ಅಪಾರ್ಟ್ ಮೆಂಟ್ ಎದುರು ಭಾನುವಾರ ನಸುಕಿನ ಜಾವ ಎರಡು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದರು. ಘಟನೆ ಬಳಿಕ ಮನೆ ಸುತ್ತ ಪೊಲೀಸ್ ಭದ್ರತೆ ಒದಗಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!