ಖ್ಯಾತ ಜಾನಪದ ಗಾಯಕ ಲಕ್ಷ್ಮಿರಾಮಗೆ ಸೇವಾ ಭೂಷಣ ಪ್ರಶಸ್ತಿ

683

ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ

ಮೈಸೂರು: ಖ್ಯಾತ ಜಾನಪದ ಗಾಯಕ ಲಕ್ಷ್ಮಿರಾಮ್ ಅವರು ಸೇವಾ ಭೂಷಣ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ ವತಿಯಿಂದ ಪ್ರತಿ ವರ್ಷ ವಿವಿಧ ಕ್ಷೇತ್ರದ ಸಾಧಕರಿಗೆ ಕೊಡ ಮಾಡುವ ರಾಜ್ಯ ಮಟ್ಟದ ‘ಸೇವಾ ಭೂಷಣ ಪ್ರಶಸ್ತಿ’ಗೆ ಲಕ್ಷ್ಮಿರಾಮ್  ಅವರನ್ನು ಆಯ್ಕೆ ಮಾಡಲಾಗಿದೆ.

ಮಾರ್ಚ್ 21ರಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ ಹೆಚ್.ಎಲ್ ಯಮುನಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲಕ್ಷ್ಮಿರಾಮ್ ಪರಿಚಯ:

ಮೈಸೂರು ಜಿಲ್ಲೆ ಕೃಷ್ಣರಾಜನಗರ ತಾಲೂಕು ನಾಡಪ್ಪನಹಳ್ಳಿಯವರಾಗಿದ್ದಾರೆ. ಕಳೆದ ಎರಡು ದಶಕಗಳಿಂದ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದು, ಇದುವರೆಗೂ 1000ಕ್ಕೂ ಹೆಚ್ಚು ಗಾಯನ ಕಾರ್ಯಕ್ರಮ ನಡೆಸಿ ಕೊಟ್ಟಿದ್ದಾರೆ.

ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ 2000ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿಗಳಿಗೆ ಜಾನಪದ ನೃತ್ಯ, ಕಂಸಾಳೆ, ಜಾನಪದ ಗೀತೆ, ಭಾವಗೀತೆ, ದೇಶಭಕ್ತಿ ಗೀತೆ  ಕಲಿಸಿದ್ದಾರೆ. 200ಕ್ಕೂ ಹೆಚ್ಚು ಬುದ್ಧ ಬಸವಣ್ಣ ಅಂಬೇಡ್ಕರ್ ಗೀತೆಗಳಿಗೆ ರಾಗ ಸಂಯೋಜನೆ ಮಾಡಿದ್ದಾರೆ. ಇವರಿಗೆ ಮೈಸೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.

ಹೊಸ ವರ್ಷಕೆ ಹೊಸಹಾಡು, ಜನಪದ ಪದಪಯಣ, ಪದವಹೇಳೋ ನಾಲಿಗೆಗೆ ಒಲಿದು ಬಾಪ್ಪ ಧರ್ಮ ಗುರುವೇ, ಜಗನಡೆಯಲಿ ಬುದ್ಧನ ಕಡೆ, ಧಮ್ಮ ಸಂಗೀತೋತ್ಸವ ಮುಂತಾದ ಹಲವು ಸರಣಿ ಸಂಗೀತ ಕಾರ್ಯಕ್ರಮ ಆಯೋಜಿಸಿದ ಹೆಗ್ಗಳಿಕೆ ಇವರದಾಗಿದೆ.




Leave a Reply

Your email address will not be published. Required fields are marked *

error: Content is protected !!