ಮಾಜಿ ಪ್ರಧಾನಿ ಡಿಸ್ಚಾರ್ಜ್

298

ನವದೆಹಲಿ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಇಂದು ಮಧ್ಯಾಹ್ನ ಡಿಸ್ಚಾರ್ಜ್ ಆಗಿದ್ದಾರೆ. 87 ವರ್ಷದ ಸಿಂಗ್ ಅವರಿಗೆ ಎದೆನೋವು ಹಾಗೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸಿಂಗ್ ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕರೋನಾ ಟೆಸ್ಟ್ ಮಾಡಿಸಲಾಗಿತ್ತು. ವರದಿ ನೆಗೆಟಿವ್ ಬಂದಿದೆ. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಡಿಸ್ಚಾರ್ಜ್ ಮಾಡಲಾಗಿದೆ ಎಂದು ಏಮ್ಸ್ ಮೂಲಗಳಿಂದ ತಿಳಿದು ಬಂದಿದೆ. ಕಳೆದ ವಾರ ಸೋನಿಯಾ ಗಾಂಧಿ ನಡೆಸಿದ್ದ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಸಿಎಂ ಸಂವಾದದಲ್ಲಿ ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!