ದೀರ್ಘ ಕೋಮಾದಲ್ಲಿ ಮಾಜಿ ರಾಷ್ಟ್ರಪತಿ

306

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ದೀರ್ಘ ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ಆಸ್ಪತ್ರೆಯಿಂದ ತಿಳಿದು ಬಂದಿದೆ. ಅವರಿಗೆ ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ ಎಂದು ಸೇನಾ ಸಂಶೋಧನೆ ಮತ್ತು ರೆಫರಲ್ ಆಸ್ಪತ್ರೆ ತಿಳಿಸಿದೆ.

ನಿನ್ನೆಯಿಂದ ಅವರ ಮೂತ್ರಪಿಂಡದಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿಕೊಂಡಿದೆ. ಶ್ವಾಸಕೋಶದ ಚಿಕಿತ್ಸೆಯನ್ನ ಸಧ್ಯ ನೀಡಲಾಗ್ತಿದೆ ಎಂದು ತಿಳಿದು ಬಂದಿದೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಪರಿಣಾಮ ಸೇನಾ ಆಸ್ಪತ್ರೆಗೆ ದಾಖಲಿಸಿ ತುರ್ತು ಶಸ್ತ್ರಚಿಕಿತ್ಸೆ ನೀಡಲಾಯ್ತು.

ಕೋವಿಡ್ 19 ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ 84 ವರ್ಷದ ಮುಖರ್ಜಿ ಅವರು ಆಸ್ಪತ್ರೆಗೆ ದಾಖಲಾದ್ರು. ಅಲ್ದೇ, ಟ್ವೀಟ್ ಮೂಲಕ ತಮ್ಮ ಸಂಪರ್ಕಕ್ಕೆ ಬಂದವರಲ್ಲಿ ಮನವಿ ಮಾಡಿ, ಪರೀಕ್ಷೆ ಮಾಡಿಸಿಕೊಳ್ಳಿ ಎಂದಿದ್ರು. ಸೋಂಕಿನ ಜೊತೆಗೆ ಇತರೆ ಸಮಸ್ಯೆಗಳು ಕಾಣಿಸಿಕೊಂಡು ಇದೀಗ ಕೋಮಾ ಸ್ಥಿತಿಯಲ್ಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!