ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಪಾಟೀಲ ಪತಿ ನಿಧನ

180

ಪ್ರಜಾಸ್ತ್ರ ಸುದ್ದಿ

ಪುಣೆ: ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಸಿಂಗ್ ಪಾಟೀಲ ಅವರ ಪತಿ ದೇವಿಸಿಂಗ್ ರಣಸಿಂಗ್ ಪಾಟೀಲ ಅವರು ಶುಕ್ರವಾರ ನಿಧನರಾಗಿದ್ದಾರೆ. 88 ವರ್ಷದ ಅವರು ಕಳೆದ ಫೆಬ್ರವರಿ 12ರಂದು ಮನೆಯಲ್ಲಿ ಕುಸಿದು ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ವೇಳೆ ಅವರಿಗೆ ಬಿಪಿ, ಕಿಡ್ನಿ ವೈಫಲ್ಯ ಸೇರಿ ವಿವಿಧ ಸಮಸ್ಯೆಗಳು ಕಾಣಿಸಿಕೊಂಡಿದ್ದವು. ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತಾದರೂ ಇಂದು ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಪತ್ನಿ, ಪ್ರತಿಭಾದೇವಿ, ಪುತ್ರ, ಕಾಂಗ್ರೆಸ್ ನಾಯಕ ರಾಜೇಂದ್ರ ಸಿಂಗ್ ಶೇಖಾವತ್ ಅವರನ್ನು ಅಗಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!