ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಧಿವಶ

176

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಮಾಜಿ ಸಚಿವ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಶುಕ್ರವಾರ ನಿಧನರಾಗಿದ್ದಾರೆ. ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ಕಳೆದ 2 ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ವಿಧಿವಶರಾಗಿದ್ದಾರೆ. ಪತಿ, ಮಗ, ಮಗಳು ಹಾಗೂ ಮೊಮ್ಮಕ್ಕಳನ್ನು ವಿಜಯಮ್ಮ ಅಗಲಿದ್ದಾರೆ. ಇವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ರಾಜಕೀಯ ನಾಯಕರೆಲ್ಲ ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!