ಮಾಜಿ ಕೇಂದ್ರ ಸಚಿವ ಶರದ್ ಯಾದವ್ ನಿಧನ

167

ಪ್ರಜಾಸ್ತ್ರ ಸುದ್ದಿ

ಗುರ್ ಗಾಂವ್: ಮಾಜಿ ಕೇಂದ್ರ ಸಚಿವ ಶರದ್ ಯಾದವ್(75) ಅವರು ಗುರುವಾರ ನಿಧನರಾಗಿದ್ದಾರೆ. ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ದೆಹಲಿಯಿಂದ ಗುರ್ ಗಾಂವ್ ಫ್ರೋಟಿಸ್ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ಗುರುವಾರ ರಾತ್ರಿ 10.20ರ ಸಮಯದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಜೆಪಿ ಚಳುವಳಿಯಲ್ಲೇ ವಿದ್ಯಾರ್ಥಿಯಾಗಿದ್ದಾಗಲೇ ರಾಜಕೀಯಕ್ಕೆ ಪ್ರವೇಶಿಸಿದವರು. ವಿ.ಪಿ ಸಿಂಗ್ ಹಾಗೂ ವಾಜಪೇಯಿ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿದ್ದರು. 7 ಸಾರಿ ಲೋಕಸಭೆಗೆ ಹಾಗೂ 3 ಬಾರಿ ರಾಜ್ಯಸಭೆಗೆ ಆಯ್ಕೆ ಆಗಿದ್ದಾರೆ. 2018ರಲ್ಲಿ ಲೋಕತಂತ್ರ ಜನತಾ ದಳ ಪಕ್ಷವನ್ನು ಸ್ಥಾಪಿಸಿದರು. ಮುಂದೆ ಎರಡು ವರ್ಷಗಳ ನಂತರ ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳದೊಂದಿಗೆ ವಿಲಿನಗೊಳಿಸಿದರು. ಶರದ್ ಯಾದವ್ ನಿಧನಕ್ಕೆ ಪ್ರಧಾನಿ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!