ಪಿಯು ವಿದ್ಯಾರ್ಥಿನಿಯರಿಗೆ ಇನ್ನು ಉಚಿತ ಪ್ರವೇಶ

295

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹೆಣ್ಣು ಮಕ್ಕಳು ಓದಿ ವಿದ್ಯಾವಂತರಾಗಬೇಕು ಎಂದು ಹಲವು ಯೋಜನೆಗಳನ್ನು ತರಲಾಗಿದೆ. ಇದೀಗ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ನೀಡಿದೆ. ಅದೇನು ಅಂದರೆ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿನಿಯರು ಫೀ ಕಟ್ಟುವಂತಿಲ್ಲ. ಸಂಪೂರ್ಣ ಉಚಿತವಾಗಿ ಪ್ರವೇಶ ಪಡೆಯಬಹುದಾಗಿದೆ ಎಂದು ಆದೇಶ ಹೊರಡಿಸಿದೆ.

2019-20ನೇ ಸಾಲಿನಲ್ಲಿ 456 ರೂಪಾಯಿ ಫೀ ಕಟ್ಟಿಸಿಕೊಳ್ಳಲಾಗಿದೆ. ಇನ್ನು ಮುಂದೆ ಈ ಶುಲ್ಕ ಸಹ ಇರುವುದಿಲ್ಲ. 2022-23ನೇ ಸಾಲಿನಿಂದ ಪಿಯುಸಿಗೆ ಸರ್ಕಾರಿ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿನಿಯರು ಶಾಶ್ವತವಾಗಿ ಸಂಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ. ವಿದ್ಯಾರ್ಥಿನಿಯರ ಶುಲ್ಕವನ್ನು ಸರ್ಕಾರ ಕಾಲೇಜಿನ ಪ್ರಾಂಶುಪಾಲರ ಖಾತೆಗೆ ನೇರವಾಗಿ ಜಮಾ ಮಾಡಲಿದೆ.




Leave a Reply

Your email address will not be published. Required fields are marked *

error: Content is protected !!