ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಟಾಲಿವುಡ್ ಮೆಗಾ ಸ್ಟಾರ್ ಚಿರಂಜೀವಿ ಅವರು ಚಿತ್ರರಂಗದವರಿಗಾಗಿ ಉಚಿತ ಕೋವಿಡ್ ಲಸಿಕೆ ವ್ಯವಸ್ಥೆ ಮಾಡಿದ್ದಾರೆ. ಕರೋನಾ ಕ್ರೈಸಿಸ್ ಚಾರಿಟಿ ಮೂಲಕ ಅಪೊಲೋ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಲಸಿಕೆ ವ್ಯವಸ್ಥೆ ಮಾಡಿದ್ದಾರೆ.
45 ವರ್ಷ ದಾಟಿದ ಚಿತ್ರರಂಗದ ಕಾರ್ಮಿಕರು, ಸಿನಿಮಾ ಪತ್ರಕರ್ತರು ಸೇರಿದಂತೆ ಅನೇಕರು ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.