ಆ.5ರಿಂದ 15ರ ತನಕ ಪ್ರವಾಸಿ ತಾಣಗಳಿಗೆ ಉಚಿತ ಪ್ರವೇಶ

265

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ಕಳೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಇದರ ಪ್ರಯುಕ್ತ ದೇಶದಲ್ಲಿನ ಎಎಸ್ಐ ಪ್ರವಾಸಿ ತಾಣಗಳಿಗೆ ಭಾರತೀಯರಿಗೆ ಹಾಗೂ ವಿದೇಶಿಯರಿಗೆ ಉಚಿತ ಪ್ರವೇಶ ನೀಡಲಾಗಿದೆ.

ಈ ಬಗ್ಗೆ ಕೇಂದ್ರ ಸಂಸ್ಕೃತಿ ಸಚಿವಾಲಯ ತಿಳಿಸಿದೆ. ಪ್ರವಾಸಿ ತಾಣಗಳು, ವಸ್ತು ಸಂಗ್ರಹಾಲಯಗಳು, ಸ್ಮಾರಕಗಳು ಸೇರಿದಂತೆ ಎಲ್ಲ ರೀತಿಯ ಪ್ರವಾಸಿ ಸ್ಥಳಗಳಿಗೆ ಉಚಿತ ಪ್ರವೇಶ ನೀಡಲಾಗುತ್ತಿದೆ. ಈ ಮೂಲಕ ದೇಶದ ಭವ್ಯ ಇತಿಹಾಸ, ಸಂಸ್ಕೃತಿ ಹಾಗೂ ಸಾಧನೆಗಳನ್ನು ಸ್ಮರಿಸಿಕೊಳ್ಳಲು ಇದೊಂದು ಅವಕಾಶವಾಗಿದೆ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕಿಶನ್ ರೆಡ್ಡಿ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!