ನೆಚ್ಚಿನ ತೋಟದಲ್ಲಿ ಲೀಲಾವತಿ ಅಂತ್ಯಸಂಸ್ಕಾರ

218

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನೆಲಮಂಗಲ ಹತ್ತಿರ ಇರುವ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ಅವರ ತೋಟದಲ್ಲಿ ಅವರ ಅಂತಿಮ ಸಂಸ್ಕಾರ ಮಾಡಲಾಗಿದೆ. ಭಾರತ ಚಿತ್ರರಂಗದ ಶ್ರೇಷ್ಠ ನಟಿಯಾದ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶುಕ್ರವಾರ ಸಂಜೆ ನಿಧನರಾಗಿದ್ದಾರೆ.

ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಸಂಸ್ಕಾರ ನಡೆಸಲಾಯಿತು. ಪುತ್ರ ವಿನೋದ್ ರಾಜಕುಮಾರ್ ಅಂತಿಮ ವಿಧಿ ವಿಧಾನಗಳನ್ನು ಪೂರೈಸಿದರು. ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಹಾಗೂ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಕನ್ನಡ, ತಮಿಳು, ತೆಲುಗು, ಮಲಿಯಾಳಂನಲ್ಲಿ 600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೇ 400 ಚಿತ್ರಗಳನ್ನು ಅಭಿನಯಿಸಿದ್ದಾರೆ. ಕನ್ನಡಪರ ಹೋರಾಟಗಳಲ್ಲಿ ಸದಾ ಮುಂದೆ ಇರುತ್ತಿದ್ದರು. ಸಮಾಜಿಕ ಸೇವೆಯಲ್ಲಿಯೂ ತೊಡಗಿಸಿಕೊಂಡಿದ್ದರು. ಸಾರ್ವಜನಿಕರಿಗಾಗಿ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ, ಒಂದು ಪಶು ಆಸ್ಪತ್ರೆಯನ್ನು ನಿರ್ಮಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಹಲವು ಸಚಿವರು, ಚಿತ್ರರಂಗದ ಹಿರಿಯ, ಕಿರಿಯ ನಟ, ನಟಿಯರು ಸೇರಿ ಅಪಾರ ಸಂಖ್ಯೆಯ ಅಭಿಮಾನಿಗಳು ಅಂತಿಮ ದರ್ಶನ ಪಡೆದರು.




Leave a Reply

Your email address will not be published. Required fields are marked *

error: Content is protected !!