ಜಿ20 ಅತಿಥಿಗಳಿಗೆ ಔತಣಕೂಟ, ಖರ್ಗೆಗಿಲ್ಲ ಆಹ್ವಾನ, ದೇವೇಗೌಡರು ದೂರ

108

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಜಿ20 ದೇಶಗಳ ಶೃಂಗಸಭೆಗೆ ರಾಷ್ಟ್ರ ರಾಜಧಾನಿಯಲ್ಲಿ ಸಕಲ ಸಿದ್ಧತೆ ನಡೆದಿದೆ. ವಿದೇಶಿ ನಾಯಕರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಶೃಂಗಸಭೆಯ ಭಾಗವಾಗಿ ನಾಳೆ ಗಣ್ಯರಿಗೆ ರಾಷ್ಟ್ರಪತಿ ಕಾರ್ಯಾಲಯದಿಂದ ಔತಣಕೂಟ ಏರ್ಪಡಿಸಲಾಗಿದೆ. ಆದ್ರೆ, ಔತಣಕೂಟಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಆಹ್ವಾನ ಬಂದಿಲ್ಲವಂತೆ.

ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ದೇವೇಗೌಡರಿಗೆ ಆಹ್ವಾನ ನೀಡಲಾಗಿದೆ. ಎಐಸಿಸಿ ಅಧ್ಯಕ್ಷರಿಗೆ ಆಹ್ವಾನ ಬಂದಿಲ್ಲ ಎಂದು ಕಾಂಗ್ರೆಸ್ ಕಾರ್ಯಾಲಯ ತಿಳಿಸಿದೆ. ಹೀಗಾಗಿ ಖರ್ಗೆ ಅವರು ನಾಳೆಯ ಔತಣಕೂಟದಲ್ಲಿ ಭಾಗವಹಿಸುತ್ತಿಲ್ಲ. ಅನಾರೋಗ್ಯದ ಕಾರಣದಿಂದ ದೇವೇಗೌಡರು ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಬಿಹಾರ್ ಸಿಎಂ ನಿತೀಶ್ ಕುಮಾರ್, ಜಾರ್ಖಾಂಡ್ ಸಿಎಂ ಹೇಮಂತ್ ಸೂರೇನ್, ಪಂಜಾಬ್ ಸಿಎಂ ಭಗವಂತ್ ಮಾನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಸೇರಿ ಹಲವು ಗಣ್ಯರು ಭಾಗವಹಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!