ಎರಡು ಗುಂಪುಗಳ ನಡುವೆ ಗಲಾಟೆ: ಇಬ್ಬರ ಸಾವು

260

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಇಬ್ಬರ ಪ್ರಾಣ ಹೋದ ದುರ್ಘಟನೆ ನಡೆದಿದೆ. ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಗುರುವಾರ ಮುಂಜಾನೆ ಈ ಘಟನೆ ನಡೆದಿದೆ.

ಯಂಕಪ್ಪ ತಳವಾರ(60) ಹಾಗೂ ಪಾಷವಾಲಿಸಾಬ್ ಮಾಳಿಗದ್ದಿ(22) ಮೃತ ದುರ್ದೈವಿಗಳು. ಧರ್ಮಣ್ಣ ಹರಿಜನ ಅನ್ನೋ ಯುವಕನಿಗೆ ಗಂಭೀರ ಗಾಯವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಯಾವ ಕಾರಣಕ್ಕೆ ಗಲಾಟೆ ನಡೆದಿದೆ ಅನ್ನೋದರ ತನಿಖೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!