ಕೋಲಾರದಲ್ಲಿ ಸಾರ್ವಜನಿಕ ಗಣೇಶೋತ್ಸವ ನಿಷೇಧ

356

ಪ್ರಜಾಸ್ತ್ರ ಸುದ್ದಿ

ಕೋಲಾರ: ಕೋವಿಡ್ 19 ಹಾವಳಿಯಿಂದ ಈ ಬಾರಿ ಬಹುತೇಕ ಹಬ್ಬಗಳು ಸರಳ ಹಾಗೂ ಸಂಕ್ಷಿಪ್ತವಾಗ್ತಿವೆ. ಆದ್ರೆ, ಗಣೇಶ ಹಬ್ಬ ಅಂದ್ರೆ, ಅಲ್ಲೊಂದು ಅದ್ಧೂರಿ ಇರುತ್ತೆ. ಇದಕ್ಕೆ ರಾಜ್ಯದಲ್ಲಿ ಬ್ರೇಕ್ ಬೀಳುವ ಸಾಧ್ಯತೆಯಿದೆ. ಯಾಕಂದ್ರೆ, ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ ಹೇರಲಾಗ್ತಿದೆ.

ಇದೀಗ ಕೋಲಾರದಲ್ಲಿಯೂ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶಮೂರ್ತಿ ಪ್ರತಿಷ್ಠಾಪನೆ, ಮೆರವಣಿಗೆ ಮಾಡುವುದನ್ನ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಹೇಳಿದ್ದಾರೆ. ತಮ್ಮ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ನಡೆಸಿದ ಪ್ರತಿಕಾಗೋಷ್ಠಿಯಲ್ಲಿ ಮಾತ್ನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶೋತ್ಸವಕ್ಕೆ ಅವಕಾಶವಿಲ್ಲ. ತಮ್ಮ ತಮ್ಮ ಮನೆಗಳಲ್ಲಿ ಪರಿಸರ ಸ್ನೇಹ ಗಣೇಶಮೂರ್ತಿ ಪೂಜಿಸಿ, ಮನೆಯಲ್ಲಿ ವಿಸರ್ಜಿಸಬೇಕು. ಸಾರ್ವಜನಿಕ ಬಾವಿ, ಕೆರೆಗಳಲ್ಲಿ ವಿಸರ್ಜಿಸಲು ಅವಕಾಶವಿಲ್ಲವೆಂದು ಹೇಳಿದ್ದಾರೆ.

ಇನ್ನು ಇದೇ ವೇಳೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ, ಪರಿಸರ ಸ್ನೇಹಿ ಗಣೇಶ ಹಬ್ಬದ ಬಿತ್ತಿ ಚಿತ್ರವನ್ನು ಬಿಡುಗಡೆಗೊಳಿಸಲಾಯ್ತು. ಎಸ್ಪಿ ಕಾರ್ತಿಕ ರೆಡ್ಡಿ, ಡಿವೈಎಸ್ಪಿ ಚೌಡಪ್ಪ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!