ಅಂಬೇಡ್ಕರ್ ಮೂರ್ತಿಯಂತೆ ಗಣೇಶ ಮೂರ್ತಿ: ದೂರು ದಾಖಲು

370

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ಗಂಗಾವತಿಯ ಅಂಬೇಡ್ಕರ್ ನಗರದಲ್ಲಿ ವಿನಾಯಕ ಸ್ನೇಹವೃಂದ ಯುವಕ ಮಂಡಳಿಯವರು ಗಣೇಶನನ್ನು ಪ್ರತಿಷ್ಠಾಪಿಸಿದ್ದಾರೆ. ಅದು ಈಗ ವಿವಾದವಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸಂವಿಧಾನಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರಂತೆ ಹೋಲುವ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿದೆ. ಈ ರೀತಿ ಮಾಡುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ದೂರಲಾಗಿದೆ. ಗಲಭೆ ಸೃಷ್ಟಿಸುವ ಸಲುವಾಗಿಯೇ ಈ ರೀತಿ ಮಾಡಲಾಗಿದೆ ಎಂದು ಆರೋಪಿಸಿ, ಗಂಗಾವತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!