ಪಾಲಿಕೆ ಆಯುಕ್ತರಿಗೆ ಶಾಸಕಿ ಶಾಕ್

396

ಬೆಳಗಾವಿ: ಕಸ ವಿಲೇವಾರಿ ಘಟಕದ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮ್ಮ ನಡೆಯಿಂದ ನಿಮ್ಗೆ ನಾಚಿಕೆ ಬರುವುದಿಲ್ವಾ ಅಂತಾ ಪಾಲಿಕೆ ಆಯುಕ್ತರ ವಿರುದ್ಧ ಕಿಡಿ ಕಾರಿದ್ದಾರೆ.

ತುರಮರಿ ಗ್ರಾಮದಲ್ಲಿ ನಿರ್ಮಾಣವಾಗ್ತಿರುವ ಕಸ ವಿಲೇವಾರಿ ಘಟಕದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಲಾಗ್ತಿದೆ. ಜಿಲ್ಲಾ ಪಂಚಾಯ್ತಿ ಸದಸ್ಯರು, ಗ್ರಾಮ ಪಂಚಾಯ್ತಿ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಇಲ್ಲಿಗೆ ಮೊದಲು ನೀವು ಬರುವ ಬದಲು ಅಧಿಕಾರಿಗಳ ಜೊತೆ ಸಭೆ ನಡೆಸಿದ್ರೆ ಹೇಗೆ ಎಂದು ವಾಗ್ದಾಳಿ ನಡೆಸಿದ್ದಾರೆ. ಅಲ್ದೇ, ಶಾಸಕಿ ಆಕ್ರೋಶಕ್ಕೆ ಕಾರಣವಾಗಿರುವುದು ಮಾಜಿ ಶಾಸಕ ಸಂಜಯ ಪಾಟೀಲ ಜೊತೆ ಪಾಲಿಕೆ ಆಯುಕ್ತರು ಕಸ ವಿಲೇವಾರಿ ಘಟಕದ ಸ್ಥಳಕ್ಕೆ ಹೋಗಿರುವುದಕ್ಕೆ ಅಂತಾ ಹೇಳಲಾಗ್ತಿದೆ.

100 ಟನ್ ಕಸ ವಿಲೇವಾರಿ ಘಟಕದಿಂದ 400ಕ್ಕೂ ಹೆಚ್ಚು ಟನ್ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಮುಂದಾಗಿರುವುದ್ರಿಂದ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಿದ್ದಾರೆ. ಇವರಿಗೆ ಗ್ರಾಮಾಂತರ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ ನೀಡಿದ್ದು ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡ್ರು.




Leave a Reply

Your email address will not be published. Required fields are marked *

error: Content is protected !!