ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ: ಮೂವರ ಸಾವು

440

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಸಿಲಿಂಡರ್ ಸ್ಫೋಟ ಪ್ರಕರಣ ನಡೆದಿದ್ದು, ಮೂವರು ಸಾವನ್ನಪ್ಪಿದ್ದಾರೆ ಹಾಗೂ ಇಬ್ಬರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಹತ್ತಾರು ಬೈಕ್ ಗಳು ಸುಟ್ಟು ಕರಕಲಾಗಿವೆ.

ಚಾಮರಾಜಪೇಟೆಯ ನ್ಯೂ ತಗರುಪೇಟೆಯಲ್ಲಿ ಗುರುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಗೆ ಮೃತದೇಹಗಳು ಚಿದ್ರವಾಗಿವೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಮೊನ್ನೆಯಷ್ಟೇ ಅಪಾರ್ಟ್ ಮೆಂಟ್ ನಲ್ಲಿ ಸ್ಫೋಟ ಪ್ರಕರಣ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಇದೀಗ ಮತ್ತೊಂದು ದುರಂತ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!