ಗೀಸರ್ ಸೋರಿಕೆ: ತಾಯಿ ಸಾವು, ಮಗು ಸ್ಥಿತಿ ಗಂಭೀರ

173

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಗ್ಯಾಸ್ ಗೀಸರ್ ಸೋರಿಕೆಯಿಂದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಸಿಲಿಕಾನ್ ಸಿಟಿಯ ಅಶ್ವಥ ನಗರದಲ್ಲಿ ನಡೆದಿದೆ. ಇನ್ನು ನಾಲ್ಕು ವರ್ಷದ ಮಗುವಿನ ಸ್ಥಿತಿ ಗಂಭೀರವಾಗಿದೆ. ರಮ್ಯಾ ಮೃತ ದುರ್ದೈವಿ.

ಮಗುವಿಗೆ ಸ್ಥಾನ ಮಾಡಿಸಲು ಹೋದ ಸಂದರ್ಭದಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿದೆ. ಈ ವೇಳೆ ಸ್ನಾನದ ಕೋಣೆ ಲಾಕ್ ಮಾಡಿದ್ದರಿಂದ ಉಸಿರಾಟದ ಸಮಸ್ಯೆಯಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ತುಂಬಾ ಹೊತ್ತು ಆದರೆ ಪತ್ನಿ ಹೊರಗೆ ಬರದೆ ಇರುವುದರಿಂದ ಪತಿ ಬಾಗಿಲು ಮುರಿದು ನೋಡಿದಾಗ ಘಟನೆ ತಿಳಿದು ಬಂದಿದೆ.

ಸದಾಶಿವ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದುರಂತವೆಂದರೆ ರಮ್ಯಾ ಗರ್ಭಿಣಿಯಾಗಿದ್ದರು ಎನ್ನಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!