ಗೌತಮ್ ಗಂಭೀರ್ ಲಕ್ನೋ ತಂಡದ ಮೆಂಟರ್

185

ಪ್ರಜಾಸ್ತ್ರ ಕ್ರೀಡಾ ಸುದ್ದಿ

ನವದೆಹಲಿ: ಐಪಿಎಲ್ ಕ್ರೀಡಾ ಕೂಟದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕನಾಗಿ ಎರಡು ಚಾಂಪಿಯನ್ಸ್ ಪಟ್ಟಕ್ಕೆ ಏರಿಸಿದ್ದ ಟೀಂ ಇಂಡಿಯಾ ಮಾಜಿ ಆಟಗಾರ ಹಾಗೂ ಸಂಸದ ಗೌತಮ್ ಗಂಭೀರ್ ಇದೀಗ ಹೊಸ ಜವಾಬ್ದಾರಿಯೊಂದನ್ನು ವಹಿಸಿಕೊಂಡಿದ್ದಾರೆ.

2022ರ ಐಪಿಎಲ್ ಟೂರ್ನಿಯಲ್ಲಿ ಲಕ್ನೋ ತಂಡವೊಂದು ಹೊಸದಾಗಿ ಸೇರಿಕೊಂಡಿದೆ. ಈ ತಂಡಕ್ಕೆ ಮೆಂಟರ್ ಆಗಿ ಗೌತಮ್ ಗಂಭೀರ್ ನೇಮಕ ಮಾಡಲಾಗಿದೆ. ಈ ಕುರಿತು ತಂಡದ ಮಾಲೀಕ ಸಂಜೀವ್ ಗೋಯೆಂಕಾ ತಿಳಿಸಿದ್ದಾರೆ. ಗೌತಮ್ ಡೆಲ್ಲಿ ಡೇರ್ ಡೆವಿಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಪರವಾಗಿ 10 ಸೀಸನ್ ಗಳಲ್ಲಿ 154 ಪಂದ್ಯಗಳಲ್ಲಿ ಆಟವಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!