ಗೀತಾ ಶಿವರಾಜಕುಮಾರ್ ಕಾಂಗ್ರೆಸ್ ಸೇರ್ಪಡೆ

119

ಪ್ರಜಾಸ್ತ್ರ ಸುದ್ದಿ

ನಟ ಶಿವರಾಜಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್ ಇಂದು ಕಾಂಗ್ರೆಸ್ ಸೇರ್ಪಡೆಯಾದರು. ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಪುತ್ರಿ ಗೀತಾ ಶಿವರಾಜಕುಮಾರ್ ಜೆಡಿಎಸ್ ತೊರೆದು, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾದರು.

ಸೊರಬದಲ್ಲಿ ಕಾಂಗ್ರೆಸ್ ನಿಂದ ಮಧು ಬಂಗಾರಪ್ಪ, ಬಿಜೆಪಿಯಿಂದ ಕುಮಾರ್ ಬಂಗಾರಪ್ಪ ಸ್ಪರ್ಧಿಸಿದ್ದಾರೆ. ಈ ಮೂಲಕ ಸಹೋದರರ ನಡುವೆ ಫೈಟ್ ನಡೆದಿದೆ. ಇದೀಗ ಸಹೋದರಿ ಗೀತಾ ಶಿವರಾಜಕುಮಾರ್ ಕಾಂಗ್ರೆಸ್ ಸೇರಿದ್ದು, ಓರ್ವ ಸಹೋದರ ಪರ ಓರ್ವ ಸಹೋದರ ವಿರುದ್ಧ ಪ್ರಚಾರ ನಡೆಸಬೇಕಿದೆ.

2018ರಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಮಧು ಬಂಗಾರಪ್ಪ ಸಹೋದರ ಕುಮಾರ್ ಬಂಗಾರಪ್ಪ ವಿರುದ್ಧ ಸೋಲು ಕಂಡಿದ್ದರು. ವಿಧಾನಸಭಾ ಚುನಾವಣೆಗೂ ಮೊದಲೇ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾದರು. ಈಗ ಸಹೋದರಿ ಸಹ ಕೈ ಹಿಡಿದಿದ್ದು, ಮತದಾರ ಅಣ್ತಮ್ಮರ ನಡುವೆ ಯಾರಿಗೆ ಜೈ ಎನ್ನುತ್ತಾನೆ ಅನ್ನೋ ಕುತೂಹಲವಿದೆ.




Leave a Reply

Your email address will not be published. Required fields are marked *

error: Content is protected !!