ಪ್ರಜಾಸ್ತ್ರ ಸಿನಿಮಾ ಡೆಸ್ಕ್
ವೇದಾ ಸಿನಿಮಾದ ಸಕ್ಸಸ್ ನಲ್ಲಿರುವ ಶಿವಣ್ಣ ಹಾಗೂ ಅವರ ಅಭಿಮಾನಿಗಳಿಗೆ ಹೊಸ ವರ್ಷದಂದು ಮತ್ತೊಂದು ಖುಷಿಯ ಸಂಗತಿ ಇದೆ. ಗೋಸ್ಟ್ ಚಿತ್ರದಲ್ಲಿನ ಗ್ಯಾಂಗ್ ಸ್ಟರ್ ಪಾತ್ರದ ಲುಕ್ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ಅಭಿಮಾನಿಗಳು ಫಿದಾ ಆಗಿದ್ದಾರೆ.
ನಟ, ನಿರ್ದೇಶಕ ಶ್ರೀನಿ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸಂದೇಶ್ ನಾಗರಾಜ್ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಅರ್ಜುನ್ ಜನ್ಯ ಮ್ಯೂಸಿಕ್ ಕಂಪೋಸ್ ಮಾಡುತ್ತಿದ್ದಾರೆ. ಸತ್ಯಪ್ರಕಾಶ್, ಪ್ರಶಾಂತ್, ನಾರಾಯಣನ್, ದತ್ತಣ್ಣ, ಅಭಿಜಿತ್ ಸೇರಿ ಅನೇಕರು ನಟಿಸಿದ್ದಾರೆ.