ಆಜಾದ್ ಹೆತ್ತ ತಾಯಿಗೆ ದ್ರೋಹ ಬಗೆದಿದ್ದಾರೆ: ಡಿ.ಕೆ ಶಿವಕುಮಾರ್

149

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಎಲ್ಲ ರೀತಿಯ ಅಧಿಕಾರ ಅನುಭವಿಸಿರುವ ಗುಲಾಂ ನಬಿ ಆಜಾದ್, ಪಕ್ಷಕ್ಕೆ ಶಕ್ತಿ ತುಂಬುವ ಸಮಯದಲ್ಲಿ ಉಪಕಾರ ಮರೆತಿರುವುದು ಖಂಡನೀಯ. ಅವರು ಹೆತ್ತ ತಾಯಿಗೆ ದ್ರೋಹ ಬಗೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

ದೇಶ ಕಷ್ಟ ಕಾಲದಲ್ಲಿದೆ. ದೇಶ ಒಂದುಗೂಡಿಸಿ ಸಮಗ್ರತೆ, ಶಾಂತಿ ತರಲು ನಾವೆಲ್ಲ ಹೋರಾಟ ಮಾಡುವಾಗ ಗುಲಾಂ ನಬಿ ಆಜಾದ್ ಅವರು ತಜವಾಬ್ದಾರಿಯಿಂದ ಹಿಂದೆ ಸರಿದಿದ್ದಾರೆ. ಉದಯಪುರದಲ್ಲಿ ನಡೆದ ಚಿಂತನಾ ಶಿಬಿರದಲ್ಲಿ 600 ಜನ ನಾಯಕರು ಭಾಗವಹಿಸಿದ್ದರು. ಆಗ ಗುಲಾಂ ನಬಿ ಆಜಾದ್ ಪಾತ್ರ ಮುಖ್ಯವಾಗಿತ್ತು. ಮುಖ್ಯಮಂತ್ರಿ, ಕೇಂದ್ರ ಮಂತ್ರಿ, ಲೋಕಸಭೆ, ರಾಜ್ಯಸಭೆ ಸದಸ್ಯರಾಗಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಹೀಗೆ ಕಳೆದ 50 ವರ್ಷಗಳಿಂದ ಎಲ್ಲ ಅಧಿಕಾರ ಅನುಭವಿಸಿ ಈಗ ರಾಜೀನಾಮೆ ಕೊಟ್ಟಿದ್ದಾರೆ.

ಇಂದಿರಾ ಗಾಂಧಿ, ರಾಜೀವ್ ಗಾಂಧಿ, ನರಸಿಂಹ ರಾವ್, ಮನಮೋಹನ್ ಸಿಂಗ್ ಕಾಲದಿಂದಲೂ ಅಧಿಕಾರ ಅನುಭವಿಸಿದ್ದಾರೆ. 7 ವರ್ಷಗಳ ಕಾಲ ರಾಜ್ಯಸಭಾ ವಿರೋಧಪಕ್ಷದ ನಾಯಕರಾಗಿದ್ದರು. ಪಕ್ಷದಲ್ಲಿ ಯಾರಿಗೂ ಅಧಿಕಾರ ಇಲ್ಲದಿದ್ದಾಗಲೂ ಸಾಂವಿಧಾನಿಕ ಹುದ್ದೆ ಅಲಂಕರಿಸಿದ್ದರು. ಅವರ 50 ವರ್ಷಗಳ ರಾಜಕೀಯ ಜೀವನದಲ್ಲಿ 40 ವರ್ಷಗಳ ಕಾಲ ವಿವಿಧ ಹುದ್ದೆಗಳ ಮೂಲಕ ಅಧಿಕಾರ ಅನುಭವಿಸಿದ್ದಾರೆ. ಆದರೆ, ಈಗ ರಾಜೀನಾಮೆ ಕೊಡುವ ಮೂಲಕ ದ್ರೋಹ ಬಗೆದಿದ್ದಾರೆ ಅಂತಾ ವಾಗ್ದಾಳಿ ನಡೆಸಿದರು.




Leave a Reply

Your email address will not be published. Required fields are marked *

error: Content is protected !!