‘ನಾಗಮಂಡಲ’ ಸೃಷ್ಟಿಕರ್ತ ನಡೆದು ಬಂದ ದಾರಿ…

468

ಗಿರೀಶ ಕಾರ್ನಾಡ್‌ರು ೧೯೩೮ ಮೇ ೧೯ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದರು. ತಂದೆ ಡಾ|ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿಶೀಲ ಮನೋಭಾವದ ಡಾ|ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದು ಕೊ೦ಡರು. ಬಾಲ್ಯದಲ್ಲೇ ಮದುವೆಯಾಗಿ ಪತಿಯನ್ನು ಕಳೆದುಕೊಂಡಿದ್ದ ೫ ವರ್ಷದ ಮಗ ವಸಂತನ ತಾಯಿ ಕೃಷ್ಣಾಬಾಯಿಯನ್ನು, ಸಮಾಜದ ವಿರೋಧದ ನಡುವೆಯೂ ದಿಟ್ಟತನದಿಂದ ಕೈ ಹಿಡಿದರು. ಸಮಾಜ ಏನೆನ್ನುತ್ತದೆ ಅನ್ನುವುದಕ್ಕಿಂತ ಆದರ್ಶ ಹಾಗೂ ಪ್ರಗತಿಪರತೆ ರಘುನಾಥ್ ಕಾರ್ನಾಡರಲ್ಲಿ ಕಂಡು ಬರುತ್ತದೆ. ಮುಂದೆ ಕಾರ್ನಾಡರಿಗೆ ಇಂಥ ಪ್ರಗತಿಪರ ವಾತಾವರಣವೇ ಅವರ ಬೆಳವಣಿಗೆಯಲ್ಲಿ ಸಹಾಯಕವಾಯಿತು.

ಗಿರೀಶರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ಆಯಿತು. ಆ ಬಳಿಕ ರ್ಹೊಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು. ಗಿರೀಶ ಕಾರ್ನಾಡರು ಆಕ್ಸ್‌ಫರ್ಡ್‌ ಡಿಬೇಟ ಕ್ಲಬ್ ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಆಗಿದ್ದಾರೆ.

ತಮ್ಮ ಓದು, ಚರ್ಚೆಯನ್ನು ದೇಶ ವಿದೇಶದಲ್ಲೂ ಹರಡಿ ವಿದ್ವಾಂಸರ ಸಖ್ಯದಲ್ಲಿ, ಕಲಾಸೇವಕರ ಸಹವಾಸದಲ್ಲಿ ಗುರ್ತಿಸಿಕೊಂಡ ಕಾರ್ನಾಡ್ ಬುದ್ಧಿಜೀವಿ ಎನಿಸಿಕೊಂಡರು. ಬಹುಭಾಷಾ ಪಂಡಿತರೆಂಬ ಹಿರಿಮೆಗೆ ಪಾತ್ರರಾಗಿ, ಷಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಕಾರ್ನಾಡ್ ಸೇವೆ ಸಲ್ಲಿಸಿದರು. ವಿದೇಶದಲ್ಲಿದ್ದಾಗಲೇ ಕನ್ನಡ ನಾಟಕಗಳನ್ನು ಬರೆದು ಇಲ್ಲಿಗೆ ಬಂದು ಹೊಸ ನಾಟಕಗಳ ಓದು, ಪ್ರದರ್ಶನಕ್ಕೆ ದಾರಿ ಮಾಡಿಕೊಂಡರು.

ಇವರು ಕನ್ನಡವಲ್ಲದೆ ಹಿಂದಿ, ಪಂಜಾಬಿ, ಮರಾಠಿ ಹಾಗೂ ಭಾರತೀಯ ಹಲವು ಭಾಷೆಗಳಿಗೆ ತಮ್ಮ ನಾಟಕಗಳು ಅನುವಾದಗೊಂಡು, ಪ್ರದರ್ಶನಗೊಂಡವು.

ಆಕ್ಸ್‌ಫರ್ಡ್‌ನಿಂದ ಬಂದ ನಂತರ ಮದ್ರಾಸ್‌ನಲ್ಲಿ ಆಕ್ಸ್ ಫ಼ರ್ಡ್ ಯೂನಿವರ್ಸಿಟಿ ಪ್ರೆಸ್ ನಲ್ಲಿ ಸಂಪಾದಕರಾಗಿ ನೌಕರಿಯಲ್ಲಿದ್ದು, ಅದನ್ನು ತೊರೆದು ಧಾರವಾಡಕ್ಕೆ ವಾಪಾಸಾಗಿ ನಾಟಕ ಕ್ಷೇತ್ರದಲ್ಲಿ ಕೃಷಿ ನಡೆಸಿದರು.

ಇಂಗ್ಲೆಂಡಿಗೆ ತೆರಳುವ ಮೊದಲೆ ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ ಯಯಾತಿ ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು. ಇಂಗ್ಲೆಂಡಿನಿಂದ ಮರಳಿದ ಬಳಿಕ ತುಘಲಕ್ ಹಾಗೂ ಹಯವದನ ಪ್ರಕಟವಾದವು. ಈ ನಡುವೆ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್‍ನ ನಿರ್ದೇಶಕ ರಾಗಿದ್ದು, ಮತ್ತೆ ಅದನ್ನು ಬಿಟ್ಟು ಮುಂಬಯಿಗೆ ಬಂದ ಕಾರ್ನಾಡರು ಕೆಲವು ಚಲನಚಿತ್ರಗಳಲ್ಲಿ ನಟಿಸಿದರು. ಆ ರಂಗವನ್ನೂ ತ್ಯಜಿಸಿ ಮತ್ತೆ ಬೆಂಗಳೂರಿಗೆ ಬಂದರು. ಅಲ್ಲಿಂದ ರಚಿತವಾದ ಅವರ ನಾಟಕಗಳು-ಅಂಜುಮಲ್ಲಿಗೆ, ನಾಗಮಂಡಲ, ತಲೆದಂಡ ಹಾಗೂ ಅಗ್ನಿ ಮತ್ತು ಮಳೆ.

ನಾಟಕಗಳು 

೧. ಮಾ ನಿಷಾಧ – ಏಕಾಂಕ ನಾಟಕ

೨. ಯಯಾತಿ – ೧೯೬೧

೩. ತುಘಲಕ್ – ೧೯೬೪

೪. ಹಯವದನ – ೧೯೭೨

೫. ಅಂಜುಮಲ್ಲಿಗೆ – ೧೯೭೭

೬. ಹಿಟ್ಟಿನ ಹುಂಜ ಅಥವಾ ಬಲಿ – ೧೯೮೦

೭. ನಾಗಮಂಡಲ – ೧೯೯೦

೮. ತಲೆದಂಡ – ೧೯೯೦

೯. ಅಗ್ನಿ ಮತ್ತು ಮಳೆ – ೧೯೯೫

೧೦. ಟಿಪ್ಪುವಿನ ಕನಸುಗಳು – ೧೯೯೭

೧೧. ಒಡಕಲು ಬಿಂಬ – ೨೦೦೫

೧೨. ಮದುವೆ ಅಲ್ಬಮ್

೧೩. ಫ್ಲಾವರ್ಸ – ೨೦೧೨

೧೪. ಬೆಂದ ಕಾಳು ಆನ್ ಟೋಸ್ಟ್- ೨೦೧೨

ಬ್ರಿಟಿಷ್ ಬ್ರಾಡ್‍ಕಾಸ್ಟಿಂಗ್ ಕಾರ್ಪೊರೇಶನ್ ಗಾಗಿ ಭಾರತದ ಸ್ವಾತಂತ್ರೋತ್ಸವದ ೫೦ ವರ್ಷದ ನೆನಪಿನ ಕಾರ್ಯಕ್ರಮಕ್ಕಾಗಿ ಬರೆದುಕೊಟ್ಟ ನಾಟಕ-ಟಿಪ್ಪುವಿನ ಕನಸುಗಳು.


TAG


Leave a Reply

Your email address will not be published. Required fields are marked *

error: Content is protected !!