ಸಾಮೂಹಿಕ ಅತ್ಯಾಚಾರ ಪ್ರಕರಣ: ಬೆಂಗಳೂರಲ್ಲಿ ನಾಲ್ವರ ಬಂಧನ

185

ಪ್ರಜಾಸ್ತ್ರ ಅಪರಾಧ ಸುದ್ದಿ

ಬೆಂಗಳೂರು: ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಶುಕ್ರವಾರ ಕೋರಮಂಗಲ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಪಾರ್ಕ್ ನಲ್ಲಿ ಯುವತಿ ತನ್ನ ಫ್ರೆಂಡ್ ಜೊತೆಗೆ ಕುಳಿತಿದ್ದಳು.

ಆಕೆಯನ್ನು ಬಲವಂತವಾಗಿ ನಾಲ್ವರು ಎಳೆದುಕೊಂಡು ಹೋಗಿ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಈ ಘಟನೆ ಮಾರ್ಚ್ 25, ರಾತ್ರಿ 10 ಗಂಟೆಯ ಸುಮಾರಿಗೆ ನಡೆದಿದೆ. ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್ ನಲ್ಲಿ ಕುಳಿತಿದ್ದಾಗ ಅಲ್ಲಿಗೆ ಬಂದ ನಾಲ್ವರು ಬೆದರಿಕೆ ಹಾಕಿ ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ.

ಮಾರ್ಚ್ 26ರ ಮುಂಜಾನೆ 4ಗಂಟೆಯ ಸುಮಾರಿಗೆ ಯುವತಿ ಮನೆಯ ಹತ್ತಿರ ಬಿಟ್ಟು ಹೋಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬರುತ್ತಿದೆ. ಯುವತಿ ನೀಡಿದ ದೂರಿನ ಮೇರೆಗೆ ನಾಲ್ವರನ್ನು ಮಾರ್ಚ್ 31, ಶುಕ್ರವಾರ ಬಂಧಿಸಲಾಗಿದೆ. ಆರೋಪಿಗಳು ಅಪರಾಧಿ ಕೃತ್ಯವೆಸಗುವಾಗ ದೊಮ್ಮಲೂರು, ಇಂದಿರಾನಗರ, ಆನೇಕಲ್ ಹಾಗೂ ನೈಸ್ ರೋಡ್ ಕಡೆ ಎಲ್ಲ ಸುತ್ತಾಡಿದ್ದಾರೆ ಎಂದು ಹೇಳಲಾಗಿದ್ದು, ತನಿಖೆ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!