ಸಿಂದಗಿಯಲ್ಲಿ ಯುವತಿಯ ಭೀಕರ ಹತ್ಯೆ

980

ಪ್ರಜಾಸ್ತ್ರ ಅಪರಾಧ ಸುದ್ದಿ

ಸಿಂದಗಿ: ಪಟ್ಟಣದಲ್ಲಿ ಗುರುವಾರ ಸಂಜೆ ಯುವತಿಯೊಬ್ಬಳನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಪಟ್ಟಣದ ಹೊರವಲಯದ ವಿಜಯಪುರ ರಸ್ತೆಯಲ್ಲಿ ಸಂಜೆ 6.30ರ ಸುಮಾರಿನಲ್ಲಿ ಗಂಗೂಬಾಯಿ ಯಂಕಂಚಿ (28) ಅನ್ನೋ ಯುವತಿಯ ಹತ್ಯೆ ಮಾಡಲಾಗಿದೆ.

ಸ್ಕೂಟಿಯಲ್ಲಿ ಬರುತ್ತಿದ್ದಾಗ ದಾರಿಯಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ಯುವತಿ ಮೇಲೆ ಹರಿತವಾದ ಆಯುಧದಿಂದ ಕುತ್ತಿಗೆ ಇರಿದು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ದುಷ್ಕರ್ಮಿಗಳು ಸ್ಕೂಟಿ ತೆಗೆದುಕೊಂಡು ಹೋಗಿದ್ದಾರೆ. ಕೊಲೆಯಾದ ಯುವತಿ ಜೊತೆಗೆ ಯುವಕನೊಬ್ಬ ಇದ್ದ ಎಂದು ಹೇಳಲಾಗುತ್ತಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಸಿಪಿಐ ಹುಲಗೆಪ್ಪ ಸೇರಿ ಪೊಲೀಸ್ ಸಿಬ್ಬಂದಿ ಬಂದಿದ್ದು, ಪರಿಶೀಲನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!