ಬಾಲಕಿಯರ ವಸತಿ ನಿಲಯದ ಬಾತ್ ರೂಂನಲ್ಲಿ ಕ್ಯಾಮೆರಾ: ಬಂಧನ

126

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಬಾಲಕಿಯರ ವಸತಿ ನಿಲಯದ ಬಾತ್ ರೂಂನಲ್ಲಿ ಸಿಸಿ ಕ್ಯಾಮೆರಾ ಇಟ್ಟ ಪ್ರಕರಣ ಜಿಲ್ಲೆಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ. ಈ ಸಂಬಂಧ ಕಾಮುಕ ಸಲೀಂ ಎಂಬಾತನನ್ನು ಬಂಧಿಸಲಾಗಿದೆ.

ಖಾಸಗಿ ಕಟ್ಟಡದಲ್ಲಿ ವಸತಿ ನಿಲಯ ನಡೆಸಲಾಗುತ್ತಿದೆ. ಇಲ್ಲಿ ಸುಮಾರು 50ಕ್ಕೂ ವಿದ್ಯಾರ್ಥಿನಿಯರಿದ್ದಾರೆ. ಕಟ್ಟಡದ ಪಕ್ಕದಲ್ಲಿರುವ ಮನೆಯಲ್ಲಿ ಆರೋಪಿ ಸಲೀಂ ವಾಸವಾಗಿದ್ದಾನೆ. ಕಳೆದ ಎರಡ್ಮೂರು ದಿನಗಳಿಂದ ಈ ಕೃತ್ಯವೆಸಗಿದ್ದಾನೆ ಎನ್ನಲಾಗುತ್ತಿದೆ.

ಇಂದು ವಿದ್ಯಾರ್ಥಿನಿಯರಿಗೆ ಸಿಸಿ ಕ್ಯಾಮೆರಾ ಜೋತುಬಿದ್ದಿರುವು ಕಂಡಿದೆ. ಆಗ ಅವನ್ನು ಹಿಡಿದು ಥಳಿಸಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿನಿಯರಿಂದ ಮಾಹಿತಿ ಕಲೆ ಹಾಕಿದ್ದು, ಆರೋಪಿಯ ಕೃತ್ಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!