ಚಿನ್ನದ ಸರ ಎಗರಿಸಿದ ಕಳ್ಳ

60

ಪ್ರಜಾಸ್ತ್ರ ಅಪರಾಧ ಸುದ್ದಿ

ಮಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಹಿಳೆಯೊಬ್ಬರ ಸರವನ್ನು ಕಳ್ಳರು ಕಿತ್ತುಕೊಂಡು ಹೋದ ಘಟನೆ ನಡೆದಿದೆ. ಗಾಂಧಿನಗರದ ನರ್ಸಿಂಗ್ ಹೋಮ್ ಗೆ ಹೋಗಿದ್ದ ಮಹಿಳೆ ಮಠದ ಕಣಿ ಮುಖ್ಯರಸ್ತೆಯಲ್ಲಿ ಬರುತ್ತಿದ್ದಾಗ ಮಧ್ಯಾಹ್ನ ಈ ಘಟನೆ ನಡೆದಿದೆ.

ಬೈಕಿನಲ್ಲಿ ಬಂದು ಓರ್ವ ಕಳ್ಳ ನಿರ್ಮಲಾ ಡಿ ಎಂಬುವರ ಕುತ್ತಿಗೆಗೆ ಕೈ ಹಾಕಿ ಸುಮಾರು 40 ಗ್ರಾಂ ತೂಕದ ಸುಮಾರು 2 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚೈನ್ ಕಿತ್ತುಕೊಂಡು ಹೋಗಿದ್ದಾನೆ. ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.
Leave a Reply

Your email address will not be published. Required fields are marked *

error: Content is protected !!