ಗೂಂಡಾ ಕಾಯ್ದೆ ಅಡಿ ಪುನೀತ್ ಕೆರೆಹಳ್ಳಿ ಬಂಧನ

312

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಿಂದು ಸಂಘಟನೆಯ ಪುನೀತ್ ಕೆರೆಹಳ್ಳಿ ಎಂಬಾತನನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪದೆಪದೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆಯಂತೆ.

ಈತನ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿವೆ. ಕೆಲ ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿದೆ. ಹಾಸನ ಜಿಲ್ಲೆ ಆಲೂರು ತಾಲೂಕಿನ ಪುನೀತ್, ರಾಷ್ಟ್ರ ರಕ್ಷಣಾ ಪಡೆ ಹೆಸರಿನ ಸಂಘಟನೆಯ ಮೂಲಕ ಕೋಮು ಸೌಹಾರ್ದತೆ ಹಾಳು ಮಾಡುವ ಕೃತ್ಯದಲ್ಲಿ ಭಾಗಿಯಾಗುತ್ತಿದ್ದು, ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!