ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

556

ಬೆಂಗಳೂರು: ಕರೋನಾ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅತಿಥಿ ಉಪನ್ಯಾಸಕರ ಗೌರವ ಧನವನ್ನ 5 ಸಾವಿರ ರೂಪಾಯಿ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.

ಐಟಿಐ, ಡಿಪ್ಲೋಮಾ, ಪದವಿ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸ್ತಿರುವ 26 ಸಾವಿರ ಅತಿಥಿ ಉಪನ್ಯಾಸಕರು ಇದರ ಪ್ರಯೋಜನ ಪಡೆಯಲಿದ್ದಾರೆ. ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಶಿಕ್ಷಣ ಹಾಗೂ ಪದವೀಧರ ಕ್ಷೇತ್ರಗಳನ್ನ ಪ್ರತಿನಿಧಿಸುವ ವಿಧಾನ ಪರಿಷತ್ ಸದಸ್ಯರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಡಿಸಿಎಂ ಅಶ್ವಥನಾರಾಯಣ ಈ ನಿರ್ಧಾರ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!