ಪ್ರಜಾಸ್ತ್ರ ಸುದ್ದಿ
ತುಮಕೂರು: ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಇವುಗಳ ಭರ್ತಿ ಕಾರ್ಯ ಹೊಸ ಸರ್ಕಾರದಿಂದ ನಡೆದಿದೆ. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳು ಖಾಲಿ ಇವೆ. 3,500 ಹುದ್ದೆಗಳ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಸಚಿವರು, ಪೊಲೀಸ್ ನೇಮಕಾತಿ ಪ್ರಕ್ರಿಯೆ ಶುರುವಾಗಿದೆ. ಇನ್ನೊಂದು ವಾರದಲ್ಲಿ 3,500 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಲಾಗುತ್ತೆ ಅಂತಾ ಹೇಳಿದರು. ತುಮಕೂರು ಸ್ಮಾರ್ಟ್ ಸಿಟಿ ಯೋಜನೆ ಸಂಬಂಧ 170 ಕಾಮಗಾರಿಗಳು ನಡೆದಿವೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ತಲಾ ಶೇಕಡ 50ರಷ್ಟು ಅನುದಾನ ಬಿಡುಗಡೆ ಮಾಡುತ್ತೆ. ಕೇಂದ್ರಿಂದ ಶೇಕಡ 47ರಷ್ಟು ಅನುದಾನ ಬಂದಿದೆ ಅಂತಾ ಮಾಹಿತಿ ನೀಡಿದರು.