ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿ ಸುದ್ದಿ

185

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶಿಕ್ಷಣ ಸಚಿವರು ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಅದೇನು ಅಂದರೆ, ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಶಿಕ್ಷಕರನ್ನು 6-8ನೇ ತರಗತಿಗೆ ನಿಯುಕ್ತಗೊಳಿಸಲು, ಪರಿಶೀಲನೆ ನಡೆಸಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು, ಈ ಕೆಲಸ ಮಾಡುವ ಸಂಬಂಧ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು. 6-8ನೇ ತರಗತಿಗೆ ಖಾಲಿಯಿರುವ ಹುದ್ದೆಗಳ ಪೈಕಿ ಶೇಕಡ 40ರಷ್ಟು ಸ್ಥಾನಗಳಿಗೆ ಹಾಲಿ ಪದವೀಧರ ಶಿಕ್ಷಕರನ್ನು  ಸೇವಾ ಜೇಷ್ಠತೆ ಮೇಲೆ ಬಡ್ತಿ ನೀಡುವ ಸಂಬಂಧ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ. ಹೀಗಾಗಿ ಶೀಘ್ರದಲ್ಲಿ ಪ್ರಾಥಮಿಕ ಶಿಕ್ಷಕರಿಗೆ ಸಿಹಿ ಸುದ್ದಿ ಸಿಗುವ ಸಾಧ್ಯತೆ ಇದೆ.




Leave a Reply

Your email address will not be published. Required fields are marked *

error: Content is protected !!