ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

1030

ಬೆಂಗಳೂರು: ಈ ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರು ಸಿಹಿ ಸುದ್ದಿ ನೀಡಿದ್ದಾರೆ. ದ್ವಿತೀಯ ಭಾಷೆ ಇಂಗ್ಲಿಷ್ ಪರೀಕ್ಷೆಗೆ ನಿಗದಿತ ಸಮಯಕ್ಕಿಂತ ಅರ್ಧಗಂಟೆ ಹೆಚ್ಚುವರಿ ಸಮಯವನ್ನ ನೀಡಲಾಗಿದೆ.

ಹೆಚ್ಚುವರಿ ಸಮಯಾವಕಾಶ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ಫೋನ್ ಇನ್ ಕಾರ್ಯಕ್ರವೊಂದರಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ ಅನ್ನೋ ಮಾತುಗಳನ್ನ ಹೇಳಿದ್ದಾರೆ. ಹೆಚ್ಚುವರಿ ಸಮಯದ ಕುರಿತು ಹುಬ್ಬಳ್ಳಿಯ ವಿದ್ಯಾರ್ಥಿಯೊಬ್ಬ ಮನವಿ ಮಾಡಿಕೊಂಡಿದ್ದ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಇಂಗ್ಲಿಷ್ ಪರೀಕ್ಷೆಗೆ ನಿಗದಿತ ಸಮಯಕ್ಕಿಂತ ಅರ್ಧಗಂಟೆ ಹೆಚ್ಚುವರಿ ಸಮಯ ನೀಡಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ ಅಂತಾ ತಿಳಿಸಿದ್ರು.




Leave a Reply

Your email address will not be published. Required fields are marked *

error: Content is protected !!