ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ಸಿಕ್ತು ಗ್ರೀನ್ ಸಿಗ್ನಲ್

250

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ 19 ಕಾರಣಕ್ಕೆ ಕಳೆದ ಎರಡು ವರ್ಷಗಳ ಕಾಲ ಶೈಕ್ಷಣಿಕ ಸಂಸ್ಥೆಗಳು ನಡೆಯಲಿಲ್ಲ. ಕಳೆದೊಂದು ವರ್ಷದಿಂದ ನಿಧನವಾಗಿ ಶೈಕ್ಷಣಿಕ ಚಟುವಟಿಕೆ ಶುರುವಾಗಿದ್ದು, ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿಯೊಂದನ್ನು ಶಿಕ್ಷಣ ಇಲಾಖೆ ನೀಡಿದೆ.

2022-23ನೇ ಸಾಲಿನ ಶೈಕ್ಷಣಿಕ ಪ್ರವಾಸಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ. ಪ್ರತಿ ವರ್ಷ ಡಿಸೆಂಬರ್ ಅಂತ್ಯದೊಳಗೆ ಶೈಕ್ಷಣಿಕ ಪ್ರವಾಸ ಕೈಗೊಳ್ಳಬೇಕು. ಡಿಸೆಂಬರ್ ನಂತರ ಹೋಗುವಂತಿಲ್ಲ. ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬೇಕು. ಪೋಷಕರ ಅನುಮತಿಯನ್ನು ಪಡೆದುಕೊಂಡು ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಬೇಕು.

ಪ್ರವಾಸದ ಸಂದರ್ಭದಲ್ಲಿ ಅಪಘಾತಗಳು ಸಂಭವಿಸಿದರೆ ಶಾಲಾ ಮುಖ್ಯಸ್ಥರೆ ಹೊಣೆ. ಶಿಕ್ಷಣ ಇಲಾಖೆ ಜವಾಬ್ದಾರಿಯಲ್ಲ. ಕಡ್ಡಾಯವಾಗಿ ಕೆಎಸ್ಆರ್ ಟಿಸಿ, ರಾಜ್ಯ ಪ್ರವಾಸೋದ್ಯಮ ಇಲಾಖೆಯ ಬಸ್ ಗಳನ್ನು ಪ್ರವಾಸಕ್ಕೆ ಬಳಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!