ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಡಾ.ಶರಣಪ್ಪ ಕೊಟಗಿ

533

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮಾಡುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಾ.ಶರಣಪ್ಪ ಮತ್ತಿಕಟ್ಟಿ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜನರ ಜೀವನದ ಜೊತೆ ಚಲ್ಲಾಟವಾಡುತ್ತಿವೆ ಎಂದಿದ್ದಾರೆ.

 ಕರೋನಾ 2ನೇ ಅಲೆಯ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಸರ್ಕಾರ ವಿಫವಾಗಿದೆ. 3ನೇ ಅಲೆ ಕುರಿತು ತುರ್ತು ಪರಿಸ್ಥಿತಿಯ ಮಾದರಿಯಲ್ಲಿ ಆರೋಗ್ಯ ಸೇವೆ ಒದಗಿಸಲು ಸೂಕ್ತ ಕ್ರಮಕ್ಕೆ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ. ಜನತಾ ಕರ್ಫ್ಯೂ ಸಹ ಕಟ್ಟುನಿಟ್ಟಾಗಿ ನಡೆಯುತ್ತಿಲ್ಲ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಡಾ.ಶರಣಪ್ಪ ಕೊಟಗಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!