ಸರ್ಕಾರಿ, ಖಾಸಗಿ ಕಾಲೇಜು ರಜೆ ಸುದ್ದಿ ವದಂತಿ

528

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಜಿಲ್ಲೆಯಲ್ಲಿ ಮಾರ್ಚ್ 7ರಂದು ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಗೊಂದಲ ಮೂಡಿದ್ದು, ಇದಕ್ಕೆ ಡಿಡಿಪಿಯು ಸ್ಪಷ್ಟನೆ ನೀಡಿದ್ದಾರೆ.

ಇಂದು ಯಾವುದೇ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಯಾರೋ ಕಿಡಿಗೇಡಿಗಳು ಉಪ ನಿರ್ದೇಶಕರ ಹೆಸರಿನಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಸುಳ್ಳು ಸುದ್ದಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಬ್ಬಿಸಿದ್ದಾರೆ. ಎಂದಿನಂತೆ ಕಾಲೇಜುಗಳು ಹಾಗೂ ಪರೀಕ್ಷೆಗಳು ನಡೆಯುತ್ತವೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!