ಸರ್ಕಾರಿ ಶಿಕ್ಷಕರ ಮಕ್ಕಳು ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು

193

ಪ್ರಜಾಸ್ತ್ರ ಸುದ್ದಿ

ಧಾರವಾಡ: ಸರ್ಕಾರಿ ಶಾಲೆಯ ಶಿಕ್ಷಕರ ಮಕ್ಕಳು ಕಡ್ಡಾಯವಾಗಿ ಕನ್ನಡ ಮಾಧ್ಯಮದಲ್ಲಿ ಕಲಿಯಬೇಕು. ನಂತರ ಸರ್ಕಾರಿ ನೌಕರರ ಮಕ್ಕಳು ಕನ್ನಡ ಮಾಧ್ಯಮದಲ್ಲೇ ಕಲಿಯಬೇಕು. ಈ ಬಗ್ಗೆ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಹೇಳಿದ್ದಾರೆ.

ಈ ಹಿಂದೆ ಹಲವು ಬಾರಿ ಈ ರೀತಿಯ ವಿಷಯಗಳು ಪ್ರಸ್ತಾಪವಾಗಿವೆ. ಸರ್ಕಾರಿ ನೌಕರರು, ಜನಪ್ರತಿನಿಧಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಕಲಿಯಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು ಎಂದು. ಆಗಾಗ ನಡೆಯುತ್ತಲೇ ಇರುತ್ತೆ. ಇದೀಗ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಈ ಬಗ್ಗೆ ಪ್ರಸ್ತಾಪಿಸಿದ್ದು, ಇಂತಹ ನಿರ್ಣಯಗಳನ್ನು ಅನುಷ್ಠಾನ ಮಾಡಿಸಬೇಕು. ಇಲ್ಲದಿದ್ದರೆ ತುಂಬ ಕಷ್ಟವಿದೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!