ಗೋಹತ್ಯೆ ನಿಷೇಧ ಕಾಯ್ದೆಗೆ ಅಂಕಿತ

229

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಗೆ ಅಂಕಿತ ಬಿದ್ದಿದೆ. ಈ ಮೂಲಕ ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿದೆ.

ಗೋಹತ್ಯೆ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಕಿತ ಹಾಕಿದ್ದಾರೆ. ಜಾನುವಾರು ಹತ್ಯೆ ಹಾಗೂ ಸಂರಕ್ಷಣಾ ವಿಧೇಯಕ 2020ಕಾಯ್ದೆಗೆ ಮುದ್ರೆ ಬಿದ್ದಿದೆ.

ಗೋಹತ್ಯೆ ನಿಷೇಧಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಸಾಕಷ್ಟು ಪರ-ವಿರೋಧಗಳು ವ್ಯಕ್ತವಾಗಿವೆ. ಹೀಗಾಗಿ ಸಿಎಂ ಬಿಎಸ್ ಯಡಿಯೂರಪ್ಪ ಸಿಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದ್ದಾರೆ. ಇದು ಅಂಕಿತ ಬಿದ್ದಿದೆ. ಈ ನಿಯಮ ಉಲ್ಲಂಘಿಸಿದ್ರೆ 3-7 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರದಿಂದ 5 ಲಕ್ಷದ ತನಕ ದಂಡ ವಿಧಿಸಲಾಗುತ್ತೆ ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!