ನಾಳೆ ಲೋಕಲ್ ಫೈಟ್ ರಿಸಲ್ಟ್

409

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ವಿವಿಧ ಕಡೆ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ 27ರಂದು ಮತದಾನ ನಡೆದಿದೆ. ಇವುಗಳ ಫಲಿತಾಂಶ ನಾಳೆ ಬರಲಿದೆ. ಸಿಂದಗಿ ತಾಲೂಕಿನ ಕನ್ನೊಳ್ಳಿ ಗ್ರಾಮ ಪಂಚಾಯ್ತಿ ಹಾಗೂ ಬಂದಾಳ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಹಳ್ಳಿಗಳು ಹಾಗೂ ಆಲಮೇಲ ಪಟ್ಟಣ ಪಂಚಾಯ್ತಿಯ ಚುನಾವಣೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ.

ಮತ ಎಣಿಕೆ ಕಾರ್ಯ ಪಟ್ಟಣದ ಆರ್.ಡಿ ಪಾಟೀಲ್ ಕಾಲೇಜು ಆವರಣದಲ್ಲಿ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈಗಾಗ್ಲೇ ಸ್ಟ್ರಾಂಗ್ ರೂಮ್ ಸೇರಿ ಎಲ್ಲೆಡೆ ಪೊಲೀಸ್ ಬಂದೋಬಸ್ತಿ ಒದಗಿಸಲಾಗಿದೆ. ನಾಳೆ ಫಲಿತಾಂಶ ಪ್ರಕಟವಾಗಲಿದೆ. ಇನ್ನು ದೇವರ ಹಿಪ್ಪರಗಿ ಪಟ್ಟಣ ಪಂಚಾಯ್ತಿಯ ಫಲಿತಾಂಶ ಸಹ ನಾಳೆ ತಾಲೂಕು ಕೇಂದ್ರದಲ್ಲಿ ಪ್ರಕಟವಾಗಲಿದೆ.




Leave a Reply

Your email address will not be published. Required fields are marked *

error: Content is protected !!