ಪ್ರಜಾಸ್ತ್ರ ಸುದ್ದಿ
ಸಿಂದಗಿ: ಈಗಾಗ್ಲೇ ಗ್ರಾಮ ಪಂಚಾಯ್ತಿಗಳ ಚುನಾವಣೆ ಮುಗಿದು ಮೀಸಲಾತಿ ಪ್ರಕ್ರಿಯೆ ಸಹ ಅಂತಿಮವಾಗಿದೆ. ಹೀಗಾಗಿ ಈಗೇನಿದ್ರೂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಚುನಾವಣೆ. ಅದರ ದಿನಾಂಕ ಘೋಷಣೆ ಮಾಡಲಾಗಿದೆ.
ತಾಲೂಕಿನ 23 ಗ್ರಾಮ ಪಂಚಾಯ್ತಿಗಳ ಮೊದಲ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ದಿನಾಂಕ ಘೋಷಿಸಲಾಗಿದೆ. ಫೆಬ್ರವರಿ 3 ರಿಂದ 5ರ ವರೆಗೆ ದಿನಾಂಕ ನಿಗದಿ ಮಾಡಲಾಗಿದೆ. ಈಗಾಗ್ಲೇ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ಮಾಡಲಾದ ಮೀಸಲಾತಿ ಆಧಾರದ ಮೇಲೆ ನೂತನ ಸದಸ್ಯರು ಸ್ಪರ್ಧಿಸಬಹುದಾಗಿದೆ.