ಗೃಹಲಕ್ಷ್ಮಿ ಯೋಜನೆ ವಿಳಂಬ: ಡಿಸಿಎಂ ಏನಂದರು?

118

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಾಂಗ್ರೆಸ್ ಐದು ಗ್ಯಾರೆಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ವಿಳಂಬವಾಗುತ್ತಿರುವುದರ ಬಗ್ಗೆ ಸಾಕಷ್ಟು ವಿರೋಧಗಳು ಕೇಳಿ ಬರುತ್ತಿವೆ. ಈ ಬಗ್ಗೆ ಮಾತನಾಡಿರುವ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸಿಎಂ ಜೊತೆ ಮಾತನಾಡಿ ನಾನೇ ಈ ಯೋಜನೆ ತಡೆ ಹಿಡಿದಿದ್ದೇನೆ. ಗಲಾಟೆ ಕಡಿಮೆ ಮಾಡುವ ಉದ್ದೇಶದಿಂದ ಹೀಗೆ ಮಾಡಲಾಗಿದೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

ಈ ಯೋಜನೆ ಸಂಬಂಧ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರ ಜೊತೆಗೆ ಸಭೆ ನಡೆಸುತ್ತೇವೆ. ಸರಳವಾಗಿ ಯೋಜನೆ ಅನುಷ್ಠಾನಗೊಳಿಸುತ್ತೇವೆ. ನಿಮ್ಮ ಮೊಬೈಲ್ ಗಳಲ್ಲಿಯೇ ಅರ್ಜಿ ತುಂಬಬೇಕು. ಆ ರೀತಿಯಾಗಿ ಜಾರಿ ಮಾಡುತ್ತೇವೆ. ಭ್ರಷ್ಟಾಚಾರಕ್ಕೆ ಆಸ್ಪದ ಕೊಡುವುದಿಲ್ಲ. ಅರ್ಜಿ ಹಾಕಲು ಹಣ ವಸೂಲಿ ಮಾಡುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಅಂತಾ ಹೇಳಿದರು.

ಈ ಯೋಜನೆ ಸಂಬಂಧ ಒಂದು ಸಹಾಯವಾಣಿ ತೆರೆಯುತ್ತೇವೆ. ಯಾರಿಗೂ ಲಂಚ ಕೊಡಬೇಡಿ. ಕೆಲವು ಕಡೆ 500, 200 ರೂಪಾಯಿ ಪಡೆಯುತ್ತಿದ್ದಾರೆ ಅನ್ನೋ ಮಾಹಿತಿ ಇದೆ. ಈ ಕುರಿತು ದೂರು ಸಲ್ಲಿಸಿ. ಅಂತವರ ಏಜೆನ್ಸಿ ರದ್ದುಗೊಳಿಸುತ್ತೇವೆ ಅಂತಾ ಎಚ್ಚರಿಕೆ ನೀಡಿದರು.




Leave a Reply

Your email address will not be published. Required fields are marked *

error: Content is protected !!