‘ಲೋಕಲ್ ಫೈಟ್’ಗೆ ಗ್ರೀನ್ ಸಿಗ್ನಲ್

233

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಗ್ರಾಮ ಪಂಚಾಯ್ತಿ ಚುನಾವಣೆಗೆ ಸಂಬಂಧಿಸಿದಂತೆ 3 ವಾರದೊಳಗೆ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ಆಯೋಗಕ್ಕೆ ಸೂಚನೆ ನೀಡಿತ್ತು. ಇದೀಗ ರಾಜ್ಯ ಸರ್ಕಾರ ಲೋಕಲ್ ಫೈಟ್ ಗೆ ಗ್ರೀನ್ ಸಿಗ್ನಲ್ ನೀಡಿದೆ.

ಇದೀಗ ಎರಡು ಕ್ಷೇತ್ರಗಳ ಉಪ ಚುನಾವಣೆ ಮುಗಿದು ಫಲಿತಾಂಶ ಬಂದಿದೆ. ಇನ್ನು ಮಸ್ಕಿ, ಬಸವಕಲ್ಯಾಣ ಉಪಚುನಾವಣೆ ಸಹ ನಡೆಯುತ್ತಿದೆ. ಇವುಗಳ ಎಲೆಕ್ಷನ್ ಬಳಿಕ ಗ್ರಾಮ ಪಂಚಾಯ್ತಿ ಚುನಾವಣೆ ನಡೆಸಲು ಒಪ್ಪಿಗೆ ಸೂಚಿಸಿದೆ. ಹೀಗಾಗಿ ಶೀಘ್ರದಲ್ಲೇ ದಿನಾಂಕ ನಿಗದಿ ಮಾಡಲಾಗುತ್ತೆ.

ಈಗಾಗ್ಲೇ ಗ್ರಾಮ ಪಂಚಾಯ್ತಿ ಸದಸ್ಯರ ಅವಧಿ ಮುಗಿದಿದೆ. ಕೋವಿಡ್ 19 ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿದ್ದು, ಆಡಳಿತಾಧಿಕಾರಿಗಳನ್ನ ನೇಮಕ ಮಾಡಲಾಗಿದೆ. ಹೀಗಾಗಿ ಸ್ಥಳೀಯ ಚುನಾವಣೆಗಾಗಿ ಜನರು ಬಕಪಕ್ಷಿಯಂತೆ ಎದುರು ನೋಡ್ತಿದ್ದು, ಸಧ್ಯದಲ್ಲೇ ದಿನಾಂಕ ನಿಗದಿಯಾಗಲಿದೆ.




Leave a Reply

Your email address will not be published. Required fields are marked *

error: Content is protected !!