ನಾಳೆ ಮಲಘಾಣದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ

635

ಪ್ರಜಾಸ್ತ್ರ ಸುದ್ದಿ

ಸಿಂದಗಿ: ತಾಲೂಕಿನ ಮಲಘಾಣ ಗ್ರಾಮದಲ್ಲಿ ನಾಳೆ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಹಶ್ಲೀದಾರ್ ನಿಂಗಣ್ಣ ಬಿರಾದಾರ ತಿಳಿಸಿದ್ದಾರೆ.

ಗ್ರಾಮದ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸುವುದು, ಮನವಿಗಳನ್ನು ಸ್ವೀಕರಿಸುವುದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಂದ ಪರಿಹಾರ ಒದಗಿಸುವ ಕೆಲಸ ಮಾಡಲಾಗುವುದು. ಇದರ ಉಪಯೋಗವನ್ನು ಮಲಘಾಣ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜನರು ಪಡೆಯಬಹುದು ಎಂದು ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!