ಹಸಿರು ಪಟಾಕಿಗೆ ಗ್ರೀನ್ ಸಿಗ್ನಲ್

244

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ 19 ಹಿನ್ನೆಲೆಯಲ್ಲಿ ಪಟಾಕಿ ಮಾರಾಟ ಹಾಗೂ ಬಳಕೆಗೆ ನಿಷೇಧ ಹೇರಿದೆ. ಇದಕ್ಕೆ ಪರ-ವಿರೋಧ ವ್ಯಕ್ತವಾದ ಬೆನ್ನೆಲ್ಲೇ ಇಂದಿನಿಂದ ಹಸಿರು ಪಟಾಕಿಗೆ ಗ್ರೀನ್ ಸಿಗ್ನಲ್ ನೀಡಿದೆ.

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಹಾರಿಸುವುದು ಮೊದಲಿನಿಂದಲೂ ರೂಢಿಯಲ್ಲಿದೆ. ಆದ್ರೆ, ಈ ಬಾರಿ ನಿಷೇಧ ಹೇರಲಾಗಿತ್ತು. ಈಗ ಗ್ರೀನ್ ಪಟಾಕಿಗೆ ಅವಕಾಶ ಕಲ್ಪಿಸಲಾಗಿದೆ. ರಾಜ್ಯದಲ್ಲಿ 5 ದಿನಗಳು ಮಾತ್ರ ಮಾರಾಟಕ್ಕೆ ಅವಕಾಶವಿದೆ.

ಬೆಂಗಳೂರಿನ 60 ಮೈದಾನಗಳಲ್ಲಿ 458 ಮಳಿಗೆಗಳಿಗೆ ಅವಕಾಶ ನೀಡಲಾಗಿದೆ. ಇದಕ್ಕಾಗಿ ಮಾರಾಟಗಾರರು ಲೈಸನ್ಸ್ ಪಡೆಯಬೇಕು. ಪಟಾಕಿ ಬಾಕ್ಸ್ ಮೇಲೆ ಕಡ್ಡಾಯವಾಗಿ ಗ್ರೀನ್ ಫೈರ್ ಬಾಕ್ಸ್ ಎಂದು ಮುದ್ರಿಸಿರಬೇಕು. ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು. ಇದರ ಜೊತೆಗೆ ಕರೋನಾ ಮಾರ್ಗಸೂಚಿ ಪಾಲನೆ ಮಾಡಬೇಕು.




Leave a Reply

Your email address will not be published. Required fields are marked *

error: Content is protected !!