ಗೃಹಲಕ್ಷ್ಮಿ ಯೋಜನೆ, ಮನೆ ಬಾಗಿಲಿಗೆ ಅರ್ಜಿ!

83

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮನೆ ಒಡತಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸ್ವೀಕರಿಸಲಿದೆ ಎಂದು ತಿಳಿಸಲಾಗಿದೆ. ಇದೀಗ ಮನೆ ಬಾಗಿಲಿಗೆ ಬಂದು ಅರ್ಜಿ ಸ್ವೀಕರಿಸಲು ಮುಂದಾಗಿದೆಯಂತೆ.

ಈ ಕುರಿತು ಮಾತನಾಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಂದ ಅರ್ಜಿ ಸ್ವೀಕರಿಸಲು ಮನೆ ಬಾಗಿಲಿಗೆ ತೆರಳುವ ವ್ಯವಸ್ಥೆ ಮಾಡಲಾಗುತ್ತಿದೆ. ಇದಕ್ಕೆ ಕಂದಾಯ ಇಲಾಖೆ ಸಿಬ್ಬಂದಿ ಬಳಸಿಕೊಳ್ಳಲಾಗುತ್ತಿದೆ. 1.30 ಕೋಟಿ ಜನರು ಈ ಯೋಜನೆಗೆ ಅರ್ಜಿ ಸಲ್ಲಿಸುವ ನಿರೀಕ್ಷೆ ಇದೆ. ಎರಡು ತಿಂಗಳಲ್ಲೇ ವಿಲೇವಾರಿ ಮಾಡಲಾಗುತ್ತಿದೆ ಎಂದಿದ್ದಾರೆ.

ಈ ಯೋಜನೆ ಆಗಸ್ಟ್ ನಲ್ಲಿ ಬೆಳಗಾವಿಯಲ್ಲಿ ಚಾಲನೆ ಸಿಗಲಿದೆ. ಬಿಪಿಎಲ್, ಎಪಿಎಲ್ ಕಾರ್ಡ್ ಹೊಂದಿರುವವರು ಇದಕ್ಕೆ ಅರ್ಹರು. ತೆರಿಗೆ ಪಾವತಿ ಮಾಡುತ್ತಿರುವವರು ಇದರ ಅಡಿಯಲ್ಲಿ ಬರುವುದಿಲ್ಲ. ಒಂದು ಕುಟುಂಬದಲ್ಲಿ ಮನೆ ಒಡತಿ ಯಾರೆಂದು ಕುಟುಂಬಸ್ಥರೆ ನಿರ್ಧರಿಸಿ ಅವರ ದಾಖಲೆಗಳನ್ನು ಸಲ್ಲಿಸಬಹುದಾಗಿದೆ.




Leave a Reply

Your email address will not be published. Required fields are marked *

error: Content is protected !!