ಆ.30ಕ್ಕೆ ಗೃಹಲಕ್ಷ್ಮಿ ಯೋಜನೆ ಚಾಲನೆ, ಎಲ್ಲ ಶಾಸಕರಿಗೆ ಆಹ್ವಾನ

146

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ 5 ಗ್ಯಾರೆಂಟಿಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 30ರಂದು ಚಾಲನೆ ಸಿಗುತ್ತಿದೆ. ಈ ಮೊದಲು ಬೆಳಗಾವಿಯಲ್ಲಿ ರಾಜ್ಯಮಟ್ಟದ ಕಾರ್ಯಕ್ರಮ ನಡೆಯುತ್ತೆ ಎನ್ನಲಾಗಿತ್ತು, ನಂತರ ಅದು ಮೈಸೂರಿಗೆ ಸ್ಥಳಾಂತರಗೊಂಡಿದೆ.

ಯೋಜನೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಲಿದ್ದಾರೆ. ಹೀಗಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಎಲ್ಲ ಶಾಸಕರಿಗೆ ಆಹ್ವಾನ ನೀಡಲಾಗಿದೆ.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಆಡಳಿತ ಹಾಗೂ ವಿರೋಧ ಪಕ್ಷದ ಶಾಸಕರಿಗೆ ಆಹ್ವಾನ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ರಾಜ್ಯ ಬೇರೆ ಬೇರೆ ಜಿಲ್ಲೆಯಿಂದ ಸುಮಾರು 2 ಸಾವಿರ ಬಸ್ ಗಳಲ್ಲಿ 1 ಲಕ್ಷ ಫಲಾನುಭವಿಗಳು ಭಾಗವಹಿಸಲಿದ್ದಾರೆ. ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ಉಸ್ತುವಾರಿಯಲ್ಲಿ ಏಕಕಾಲದಲ್ಲಿ ಉದ್ಘಾಟನೆಯಾಗಲಿದೆ ಎಂದರು.

ಬೆಳಗಾವಿಯಿಂದ ಮೈಸೂರಿಗೆ ಕಾರ್ಯಕ್ರಮ ಸ್ಥಳಾಂತರಗೊಂಡಿದ್ದಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದಾರೆ. ಈ ಹಿಂದೆ ಬೆಳಗಾವಿಯಲ್ಲಿ ಕಾರ್ಯಕ್ರಮವೆಂದು ಹೇಳಿ ಸ್ಥಳ, ವೇಳಾಪಟ್ಟಿ ಸಿದ್ಧಪಡಿಸಲಾಗಿತ್ತು. ಸ್ಥಳಾಂತರಗೊಂಡಿದ್ದಕ್ಕೆ ಹೈಕಮಾಂಡ್ ಕಾರಣ ಕೊಡಬೇಕು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!