‘ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಸಾಧ್ಯವಿಲ್ಲ’

255

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿನ ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಒದಗಿಸಬೇಕೆಂದು ಹೇಳಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಸರ್ಕಾರ ಅವರ ಗೌರವಧನ ಹೆಚ್ಚಿಸಿತು. ಆದರೆ, ಇದು ಎಲ್ಲರಿಗೂ ಅನ್ವಯವಾಗುವುದಿಲ್ಲವೆಂದು ಹೇಳಿ ಪ್ರತಿಭಟನೆ ನಡೆಸಲಾಗುತ್ತಿದೆ.

ಇದೀಗ ಈ ಬಗ್ಗೆ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವಥನಾರಾಯಾಣ್, ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ನೀಡಲು ಸಾಧ್ಯವಿಲ್ಲವೆಂದಿದ್ದಾರೆ. ಈ ಮೂಲಕ ಅವರ ಆಕ್ರೋಶಕ್ಕೆ ಮತ್ತಷ್ಟು ಕಾರಣರಾಗಿದ್ದಾರೆ.

ಅತಿಥಿ ಉಪನ್ಯಾಸಕರ ಸಂಘಟನೆಗಳ ಜೊತೆಗೆ ಚರ್ಚಿಸಿಯೇ ಸರ್ಕಾರ ಗೌರವ ಧನ ಹೆಚ್ಚಿಸಿದೆ. 14 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರಲ್ಲಿ 4,500 ಉಪನ್ಯಾಸಕರು ಮಾತ್ರ ಯುಜಿಸಿ ನಿಗದಿಪಡಿಸಿದ ಶೈಕ್ಷಣಿಕ ವಿದ್ಯಾರ್ಹತೆ ಹೊಂದಿದ್ದಾರೆ. ಪ್ರತಿಭಟನೆ ನಡೆಸುವ ಮೂಲಕ ರಾಜಕೀಯ ಬಣ್ಣ ಬಳೆಯಲಾಗುತ್ತಿದೆ. ಸೇವಾಭದ್ರತೆ ಮಾತ್ರ ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!