ಗುಜರಾತ್ ಜನರ ತೀರ್ಪು ನಮ್ರತೆಯಿಂದ ಸ್ವೀಕರಿಸುತ್ತೇನೆ: ರಾಹುಲ್ ಗಾಂಧಿ

195

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಗಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದೆ. 182 ಸ್ಥಾನಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದೆ. 156 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. 17ರಲ್ಲಿ ಕಾಂಗ್ರೆಸ್, 5 ಆಪ್ ಹಾಗೂ 4ರಲ್ಲಿ ಪಕ್ಷೇತರ ಅಭ್ಯರ್ಥಿಗಳು ವಿಜಯ ಸಾಧಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಗುಜರಾತ್ ಜನತೆಯ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ನಾವು ಮರು ಹೋರಾಟ ಮಾಡುತ್ತೇವೆ. ರಾಜ್ಯದ ಜನರ ಹಕ್ಕುಗಳಿಗಾಗಿ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದಿದ್ದಾರೆ.

ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮತ್ತೆ ಸಿಎಂ ಆಗಿ ಡಿಸೆಂಬರ್ 12ರ ಮಧ್ಯಾಹ್ನ 2 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!